
Udupi: ಯೋಗಾಸನ ಸ್ಪರ್ಧೆ ಆಮಂತ್ರಣ ಬಿಡುಗಡೆ
Thursday, July 31, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಮಂಡಲೋತ್ಸವ ಸಂದರ್ಭದಲ್ಲಿ ಆಗಸ್ಟ್ 3ರಂದು ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಈಚೆಗೆ ಬಿಡುಗಡೆಗೊಳಿಸಿದರು.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಸ್ಪಧರ್ೆಯ ಆಮಂತ್ರಣ ಪತ್ರಿಕೆ ಪಯರ್ಾಯ ಪೀಠಾಧಿಪತಿಗಳಾವರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರು* ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮಠದ ರಮಣಾಚಾರ್ಯ, ರಮೇಶ್ ಭಟ್, ರತೀಶ ತಂತ್ರಿ, ಉಡುಪಿ ಪತಂಜಲಿ ಜಿಲ್ಲಾ ಪ್ರಭಾರಿ ಕೆ.ರಾಘವೇಂದ್ರ ಭಟ್, ಅನಂತರಾಯ ಶೆಣೈ, ಜಗದೀಶ ಕುಮಾರ್, ಲೀಲಾ ಆರ್. ಅಮೀನ್, ಆಜೀವ ಸದಸ್ಯ ವಿಶ್ವನಾಥ ಭಟ್, ಸದಸ್ಯ ರಾಧಾ ಶ್ಯಾಮಲ ಕೆ., ನಾಗರಾಜ ಶೇಟ್, ಶ್ರೀಪತಿ ಭಟ್, ಗಿರೀಶ ಉದ್ಯಾವರ ಇದ್ದರು.