Udupi: ಡಾ.ಬಿಳಿಮಲೆಗೆ ಕರವೇ ಗೌರವಾರ್ಪಣೆ
Wednesday, July 23, 2025
ಲೋಕಬಂಧು ನ್ಯೂಸ್, ಉಡುಪಿ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಗೌರವಿಸಿದರು.ಡಾ. ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಜಿಲ್ಲಾ ಕನ್ನಡ ಪರ ಸಂಘಟನೆ ಹಾಗೂ ಹೋರಾಟಗಾರರೊಂದಿಗೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್, ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಯಪ್ರಕಾಶ್ ಶೆಟ್ಟಿ. ಅಲ್ಫೋನ್ಸ್ ಮಿನೇಜಸ್, ಸಂಘಟನೆಯ ಪ್ರಮುಖರಾದ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಸಂತೋಷ್ ಕುಲಾಲ್, ಆಶಾ, ಮೋಹಿನಿ, ಪವಿತ್ರ ಶೆಟ್ಟಿ, ಮುಕ್ತಾ, ಚಂದ್ರಕಲಾ, ಸರೋಜಿನಿ ಮೊದಲಾದವರಿದ್ದರು.