
Bengaluru: ಮನೆಗೆಲಸದಾಕೆಗೆ ರೇಪ್: ಪ್ರಜ್ವಲ್ ರೇವಣ್ಣ ದೋಷಿ
Friday, August 1, 2025
ಲೋಕಬಂಧು ನ್ಯೂಸ್, ಬೆಂಗಳೂರು
ಕೆ.ಆರ್.ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾ.ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡಾ ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು.
ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30ರಂದು ನಡೆದಿತ್ತು . ಸರ್ಕಾರಿ ಪರ ವಕೀಲ ಎನ್. ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಹಾಜರಾಗಿದ್ದರು.