Bengaluru: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ
Friday, August 29, 2025
ಲೋಕಬಂಧು ನ್ಯೂಸ್, ಬೆಂಗಳೂರು
ಮಂಗಳೂರು ಮೂಲದ ನಟಿ, ನಿರೂಪಕಿ ಅನುಶ್ರೀ ಆ.28ರಂದು ಕೊಡಗು ಮೂಲದ ರೋಶನ್ ಜೊತೆ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ.ತನ್ನ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ, ಬಹುಕಾಲದ ಗೆಳೆಯ ರೋಶನ್ ಜೊತೆ ಹಸೆಮಣೆ ಏರಿದ್ದು, ಗುರುವಾರ ಬೆಳಗ್ಗೆ 10.56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಶನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಇಲ್ಲಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ಸಮಾರಂಭ ನೆರವೇರಿದ್ದು ಕಿರುತೆರೆ ಕಲಾವಿದರು, ಚಿತ್ರೋದ್ಯಮ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.