Brahmavara ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷರ ಆಯ್ಕೆ
Saturday, August 30, 2025
ಲೋಕಬಂಧು ನ್ಯೂಸ್, ಬ್ರಹ್ಮಾವರ
ಕರಾವಳಿ ಭಾಗದಲ್ಲಿರುವ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿರುವ ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬೆಳ್ವೆ ಸತೀಶ ಕಿಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಪಿಗೇಡಿ ಸಂಜೀವ ಶೆಟ್ಟಿ ಆಯ್ಕೆಯಾಗಿದ್ದಾರೆ.ಶುಕ್ರವಾರ ಕಾರ್ಖಾನೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಹಕಾರಿ ಸಂಘಗಳ ಉಪ ನಿಬಂಧಕರ ಕಚೇರಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ.ಎಂ. ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.