ಲೋಕಬಂಧು ನ್ಯೂಸ್, ಬ್ರಹ್ಮಾವರ
ಚೇರ್ಕಾಡಿ ಕೇಶವ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶನಿವಾರ ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಯೋಗದೊಂದಿಗೆ ಥಾಲಸೆಮಿಯಾ ಪೀಡಿತ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಶಿಬಿರದಲ್ಲಿ ಪಾಲಕರು, ಶಿಕ್ಷಕರು, ಶಾಲಾ ಸಿಬ್ಬಂದಿ ಮತ್ತು ಸ್ಥಳೀಯರು ಭಾಗವಹಿಸಿ 160 ಯೂನಿಟ್ ರಕ್ತ ಸಂಗ್ರಹಿಸಲಾಯಿತು.