Karkala: ವ್ಯಕ್ತಿಯ ಇರಿದು ಕೊಲೆ
Tuesday, August 26, 2025
ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿನ ಕುಂಟಲ್ಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.ಕೊಲೆಯಾದ ವ್ಯಕ್ತಿ ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.
ನವೀನ್ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದು, ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕಾರ್ಕಳ ಎಎಸ್‌ಪಿ ಹರ್ಷಾ ಪ್ರಿಯಂವದ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣೆ ಎಸ್ಐ ಮುರಳೀಧರ್ ನಾಯ್ಕ್, ಗ್ರಾಮಾಂತರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.