-->
Karkala: ವ್ಯಕ್ತಿತ್ವ ವಿಕಸನಕ್ಕೆ ಎನ್ಎಸ್ಎಸ್ ಪೂರಕ

Karkala: ವ್ಯಕ್ತಿತ್ವ ವಿಕಸನಕ್ಕೆ ಎನ್ಎಸ್ಎಸ್ ಪೂರಕ

ಲೋಕಬಂಧು ನ್ಯೂಸ್, ಕಾರ್ಕಳ
ವ್ಯಕ್ತಿತ್ವ ವಿಕಸನ ಎನ್ಎಸ್ಎಸ್ ಧ್ಯೇಯವಾಗಿದ್ದು, ಅದರ ಸ್ವಯಂಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ  ಎಂದು ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ. ಹೇಳಿದರು.
ಇಲ್ಲಿನ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕಾರ್ಯಕ್ರಮ ಉದ್ಘಾಟಿಸಿದ ಸಮಾಜಸೇವಕ, ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್‌ ಪ್ರವರ್ತಕ ಅವಿನಾಶ್ ಜಿ. ಶೆಟ್ಟಿ ಶುಭ ಹಾರೈಸಿದರು.


ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಸಹಯೋಜನಾಧಿಕಾರಿ ಪ್ರಸಾದ್ ಆಚಾರ್ಯ ಎಚ್., ಘಟಕದ ವಿದ್ಯಾರ್ಥಿ ನಾಯಕರಾದ ಭವಿಷ್ ಎಸ್. ಶೆಟ್ಟಿ ಮತ್ತು ಸೃಷ್ಟಿ ಶೆಟ್ಟಿ ರೆಂಜಾಳ ಉಪಸ್ಥಿತರಿದ್ದರು.


ಉಪ ಪ್ರಾಂಶುಪಾಲರಾದ ಸಾಹಿತ್ಯ ಮತ್ತು ಉಷಾ ರಾವ್ ಯು., ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು., ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಮಿತ್ರಾ, ಸಂಖ್ಯಾಶಾಸ್ತ್ರ ಉಪನ್ಯಾಸಕ ಮಂಜುನಾಥ್ ಮುದೂರು ಇದ್ದರು.


ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಶೈಲೇಶ್ ಶೆಟ್ಟಿ ಬೈಲೂರು ಸ್ವಾಗತಿಸಿ, ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ  ಕುಲಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Ads on article

Advertise in articles 1

advertising articles 2

Advertise under the article