Mangalore: ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಒಝಾರಿಯೋ ನಿಧನ
Friday, August 29, 2025
ಲೋಕಬಂಧು ನ್ಯೂಸ್, ಮಂಗಳೂರು
ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಕ್ಷೇತ್ರದ ದಿಗ್ಗಜ ಎರಿಕ್ ಅಲೆಕ್ಸಾಂಡರ್ ಒಝಾರಿಯೋ (76) ಶುಕ್ರವಾರ ನಿಧನರಾದರು.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
1949ರ ಮೇ 18ರಂದು ಇಲ್ಲಿನ ಜಪ್ಪುವಿನಲ್ಲಿ ಜನಿಸಿದ ಅವರು ಕೊಂಕಣಿ ಭಾಷೆ, ಸಂಗೀತ, ಸಾಂಸ್ಕೃತಿಕ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.
ರಾಜ್ಯದೆಲ್ಲೆಡೆ ಕೊಂಕಣಿಯನ್ನು ಶಾಲೆಗಳಲ್ಲಿ ಐಚ್ಛಿಕ ಭಾಷೆಯಾಗಿ ಅಳವಡಿಕೆಯಾಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.