-->
SITಗೆ ದೂರು‌ ನೀಡಿದ ಸೌಜನ್ಯ ತಾಯಿ

SITಗೆ ದೂರು‌ ನೀಡಿದ ಸೌಜನ್ಯ ತಾಯಿ

ಲೋಕಬಂಧು ನ್ಯೂಸ್, ಬೆಳ್ತಂಗಡಿ
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತ ದೇಹಗಳನ್ನು ಹೂಳಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಕಚೇರಿಗೆ ಗುರುವಾರ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಎಸ್ಐಟಿ ಅಧಿಕಾರಿಗಳಿಗೆ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು‌ ಅಧಿಕಾರಿಗಳ ಸೂಚನೆ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಬಳಿಕ ಅಧಿಕಾರಿಗಳ ಸೂಚನೆಯಂತೆ ಮತ್ತೆ ಬಂದು ದೂರು ನೀಡಿದ್ದಾರೆ.


ಸಾಕ್ಷಿ ದೂರುದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬರ್‌ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ‌ ಬಗ್ಗೆ ಹಲವು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article