-->
SIT ಸದಸ್ಯ ಅನುಚೇತ್ ಅಮೆರಿಕ ಪ್ರವಾಸ

SIT ಸದಸ್ಯ ಅನುಚೇತ್ ಅಮೆರಿಕ ಪ್ರವಾಸ

ಲೋಕಬಂಧು ನ್ಯೂಸ್, ಬೆಂಗಳೂರು
ಧರ್ಮಸ್ಥಳ ಕೇಸ್‌ ತನಿಖೆ ನಡುವೆಯೇ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಸದಸ್ಯ, ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.


ಪ್ರಕರಣದ ತನಿಖೆಯ ಮಧ್ಯೆಯೇ ಅವರು ಪ್ರವಾಸಕ್ಕೆ ಹೋಗಿದ್ದಾರೆ. ರಾಜ್ಯ ಸರ್ಕಾರ ಆ.19ರಿಂದ 31ರ ವರೆಗೆ ವೇತನ ಸಹಿತ ರಜೆ ಮಂಜೂರು ಮಾಡಿದ್ದು, ಆ.18ರಿಂದ ಆರಂಭವಾಗಿರುವ ‘ಇಂಟೆಲಿಜೆಂಟ್ ಟ್ರಾನ್ಸ್‌ರ್ಟೇಷನ್ ಸೊಸೈಟಿ ಆಫ್ ಅಮೆರಿಕ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಭಾಗವಹಿಸಲು ತೆರಳಿದ್ದಾರೆ.


ವೇತನ ಸಹಿತ ರಜೆ ಮಂಜೂರು ಮಾಡುವಂತೆ ಕೋರಿ ಅನುಚೇತ್‌ ಜು.16ರಂದು ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆ.1ರಂದೇ ಪ್ರವಾಸಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದ್ದರು.


ಅನುಚೇತ್ ಆ.18ರಂದೇ ಅಮೆರಿಕಕ್ಕೆ ತೆರಳಿದ್ದು ಸೆ.3 ಅಥವಾ 4ರಂದು ವಾಪಸ್ ಬರುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article