Toll gate ಕಂಬಕ್ಕೆ ಬಸ್ ಢಿಕ್ಕಿ: 12 ಮಂದಿಗೆ ಗಾಯ
Sunday, August 24, 2025
ಲೋಕಬಂಧು ನ್ಯೂಸ್, ಕುಂದಾಪುರ
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸ್ ಬಸ್ಸೊಂದು ಸಾಸ್ತಾನ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದು 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ರವಿವಾರ ಮುಂಜಾನೆ ನಡೆದಿದೆ.ಇಳಕಲ್'ನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರ ಪೈಕಿ 12 ಮಂದಿ ಸಣ್ಣ ಪುಟ್ಟ ಗಾಯಗೊಂಡರು. ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ ಪ್ರಯಾಣಿಕರು ಹಾಗೂ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೋಟ ಪೊಲೀಸರು ಪ್ರಕರಣ ದಾಖಲಿದ್ದಾರೆ