
Udupi: ಆ.2: ಶೀರೂರು ಪರ್ಯಾಯೋತ್ಸವ ಸ್ವಾಗತ ಸಮಿತಿ ಪ್ರಥಮ ಸಭೆ
Friday, August 1, 2025
ಲೋಕಬಂಧು ನ್ಯೂಸ್, ಉಡುಪಿ
ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವ ಸ್ವಾಗತ ಸಮಿಯ ಪ್ರಥಮ ಸಭೆ ಆಗಸ್ಟ್ 2ರಂದು ಅಪರಾಹ್ನ ಶನಿವಾರ ಸಂಜೆ ಗಂಟೆ 430 ಗಂಟೆಗೆ ಕೃಷ್ಣಾಪುರ ಮಠದ ಶ್ರೀಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಶ್ರೀಮಠದ ಭಕ್ತಾಭಿಮಾನಿಗಳು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಶೀರೂರು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶಪಾಲ್ ಸುವರ್ಣ ಮತ್ತು ಪ್ರಧಾನ ಕಾರ್ಯದರ್ಶಿ, ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.