Udupi ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು
Friday, August 29, 2025
ಲೋಕಬಂಧು ನ್ಯೂಸ್, ಉಡುಪಿ
ಉದ್ಯಾವರ ಗ್ರಾಮದ ಪಿತ್ರೋಡಿಯ ದಲಿತ ಕುಟುಂಬವೊಂದರ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ತಾಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರ ಪ್ರತಿಬಂಧಿಸಿ ದಲಿತ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಒತ್ತುವರಿ ತೆರವುಗೊಳಿಸದೆ ಗಂಭೀರ ಕರ್ತವ್ಯಲೋಪ ಎಸಗಿದ ಉಡುಪಿ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದೆ.
ದಲಿತ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿಯಾಗಿ ದೂರು ನೀಡಿದರು.