
Udupi: ಸಮಾಲೋಚನ ಸಭೆ
Friday, August 29, 2025
ಲೋಕಬಂಧು ನ್ಯೂಸ್, ಉಡುಪಿ
ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸೆ.5ರಂದು ಧರ್ಮಸ್ಥಳದಲ್ಲಿ ನಡೆಯುವ ಬೃಹತ್ ಸಮಾವೇಶದ ಬಗ್ಗೆ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರ ಸಮಾಲೋಚನ ಸಭೆ ಕೃಷ್ಣ ಮಠದಲ್ಲಿ ನಡೆಯಿತು.
ಮೂಡುಬಿದಿರೆ ಆಳ್ವಾಸ್ ಸಂಸ್ಥೆ ಮುಖ್ಯಸ್ಥ ಡಾ.ಮೋಹನ ಆಳ್ವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರು ಭಾಗವಹಿಸಿದ್ದರು.
ಶಾಸಕರಾದ ಯಶಪಾಲ್ ಸುವರ್ಣ ಮತ್ತು ಸುರೇಶ್ ಶೆಟ್ಟಿ ಗುರ್ಮೆ, ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ದಿವಾನ ನಾಗರಾಜ ಆಚಾರ್ಯ ಮೊದಲಾದವರು ಭಾಗವಹಿಸಿದ್ದರು.