Udupi: ಶೀರೂರು ಮಠ ಪರ್ಯಾಯಕ್ಕೆ ಸಹಕಾರ ನೀಡಿ
Sunday, August 31, 2025
ಲೋಕಬಂಧು ನ್ಯೂಸ್, ಉಡುಪಿ
ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬೆಂಗಳೂರಿನ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿದ್ದು, ಅಲ್ಲಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುವಂತೆ ಹಾಗೂ ಮುಂದಿನ ಪರ್ಯಾಯ ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶನಿವಾರ ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಠದ ಪಾರುಪತ್ಯೆಗಾರ ಶ್ರೀಶ ಭಟ್, ಕಾರ್ಯದರ್ಶಿ ಮೋಹನ ಭಟ್, ಸಂಚಾಲಕ ರಮೇಶ್ ಕಾಂಚನ್ ಇದ್ದರು.