Udupi: ಜೆಡಿಎಸ್, ಬಿಜೆಪಿಯಿಂದ ಧರ್ಮ ರಾಜಕಾರಣ
Saturday, August 30, 2025
ಲೋಕಬಂಧು ನ್ಯೂಸ್, ಉಡುಪಿ
ಬಿಜೆಪಿ ಮತ್ತು ಜೆಡಿಎಸ್ ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.ಶನಿವಾರ ಇಲ್ಲಿನ ಶ್ರೀಕೃಷ್ಣಮಠಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಪ್ರತಿಕ್ರಿಯಿಸಿ, ಜೆಡಿಎಸ್ ಮತ್ತು ಬಿಜೆಪಿಗೆ ಬೇರೆ ವೃತ್ತಿ ಇಲ್ಲ ಎಂದರು.
ಮೈಸೂರು ದಸರಾ ಹಾಗೂ ರಾಜಮಾತೆ ಪ್ರಮೋದಾದೇವಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಶ್ರೀಕೃಷ್ಣ ಮಠದಿಂದ ಈ ಹಿಂದೆಯೇ ಆಹ್ವಾನ ಇತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆಯೂ ಆಹ್ವಾನ ಮಾಡಿದ್ದರು. ಆದರೆ, ಬರಲು ಸಾಧ್ಯವಾಗಿರಲಿಲ್ಲ, ಈ ಸಂದರ್ಭದಲ್ಲಿ ಒಪ್ಪಿಕೊಂಡಿದ್ದೇನೆ ಎಂದರು.