.jpg)
Udupi: ಶ್ರಮವಿದ್ದಲ್ಲಿ ಯಶಸ್ಸು
Saturday, August 30, 2025
ಲೋಕಬಂಧು ನ್ಯೂಸ್, ಉಡುಪಿ
ಎಲ್ಲಿ ಶ್ರಮ ಇರುತ್ತದೆಯೋ ಅಲ್ಲಿ ಫಲ ಸಿಗುತ್ತದೆ. ದೀಕ್ಷಾ ಅವರು ಬದುಕಿನಲ್ಲಿ ದೊಡ್ಡ ಸಾಧನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಿದ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ದೀಕ್ಷಾ ವಿ. ಅವರಿಗೆ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೋ ಅದು ಶಾಶ್ವತವಾಗಿ ಉಳಿಯುತ್ತದೆ ಎಂದು ಡಿಕೆಶಿ ಹೇಳಿದರು.
216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನದ ಮೂಲಕ ದೀಕ್ಷಾ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ನಲ್ಲಿ ದಾಖಲೆ ಬರೆದರು.
‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಸಂಸ್ಥೆಯ ಏಷ್ಯಾ ಮುಖ್ಯಸ್ಥ ಡಾ. ಮನೀಶ್ ವಿಷ್ಣೋಯ್ ಉಪಸ್ಥಿತರಿದ್ದರು.
ಅಭಿನಂದನಾ ಸಮಾರಂಭದಲ್ಲಿ ದೀಕ್ಷಾ ಅವರ ನೃತ್ಯ ಗುರು ವಿದ್ವಾನ್ ಶ್ರೀಧರ ರಾವ್, ತಂದೆ ವಿಠಲ ಪೂಜಾರಿ, ತಾಯಿ ಶುಭಾ, ಪತಿ ರಾಹುಲ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಡಾ.ಜಿ. ಶಂಕರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ರತ್ನ ಕಲಾಮಂಡಲದ ಮಹೇಶ್ ಠಾಕೂರ್, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಅಶೋಕ್ ಕೊಡವೂರು, ಉದಯ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ಗೀತಾಂಜಲಿ ಸುವರ್ಣ ಪಾಲ್ಗೊಂಡಿದ್ದರು.