Udupi: ಗಣೇಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
Thursday, August 28, 2025
ಲೋಕಬಂಧು ನ್ಯೂಸ್, ಉಡುಪಿ
ಇಲ್ಲಿನ ರಥಬೀದಿ ಭಕ್ತವೃಂದ, ರಿಕ್ಷಾ ಚಾಲಕರು ಹಾಗೂ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಬುಧವಾರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಮಾಜಿ ಶಾಸಕ ರಘುಪತಿ ಭಟ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ದಿನೇಶ ಪುತ್ರನ್ ಮೊದಲಾದವರಿದ್ದರು.