-->
Virajpete: ಮುಷ್ತಾಕ್'ರಿಂದ ದಸರಾ ಉದ್ಘಾಟನೆ ಸ್ವಾಗತಾರ್ಹ

Virajpete: ಮುಷ್ತಾಕ್'ರಿಂದ ದಸರಾ ಉದ್ಘಾಟನೆ ಸ್ವಾಗತಾರ್ಹ

ಲೋಕಬಂಧು ನ್ಯೂಸ್, ವಿರಾಜಪೇಟೆ
ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ಕಾಕ್ ನಾಡಹಬ್ಬ ದಸರಾ ಉದ್ಘಾಟನೆ ಮಾಡುತ್ತಿರುವ ಬಗ್ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ‌‌ ಕೆಲವರು ವಿರೋಧ ವ್ಯಕ್ತಪಡಿಸಿರುವ ಬೆನ್ನಲೇ ಬಿಜೆಪಿ ಸಂಸದ ಮತ್ತು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಲೇಖಕಿ ಬಾನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದು, ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನ ಹಕ್ಕು ಕೊಡಬೇಕು, ಮಸೀದಿಗಳಿಗೆ ಅವಕಾಶ ಕೊಡಬೇಕು ಎಂದವರು ಈ ಹಿಂದೆ ಆಗ್ರಹಿಸಿದ್ದರು.


ಕನ್ನಡ ಭಾಷೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಬಾನು ಮುಷ್ತಾಕ್ ನೀಡಿದ ಕೊಡುಗೆ ಅಪಾರ. ನಾವು ಅದನ್ನು ಗೌರವಿಸಿ ರಾಜ್ಯ ಸರಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇವೆ' ಎಂದರು.


ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಚೇರಿ ಬಳಿ ಬಿಜೆಪಿ ಹಮ್ಮಿಕೊಂಡಿದ್ದ 'ಧರ್ಮದ ಉಳಿವಿಗಾಗಿ ಧರ್ಮಯುದ್ಧ' ಪ್ರತಿಭಟನೆಯಲ್ಲಿ ಸಂಸದ ಯದುವೀ‌ರ್ ಭಾಗವಹಿಸಿದ್ದರು.


ವೈರಲ್ ವಿಡಿಯೋ ಗೆ ಸ್ಪಷ್ಟನೆ ಅಗತ್ಯ. ಬಾನು ಮುಷ್ತಾಕ್ ಈ ಹಿಂದೆ ಮಾಡಿದ ಭಾಷಣದ ವೀಡಿಯೊವೊಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಆಯ್ಕೆ ಸ್ವಾಗತ ಎಂದು ಹೇಳಿದ ಬೆನ್ನಲ್ಲೇ ಸಂಸದ ಯದುವೀ‌ರ್, ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಬಾನು ಮುಷ್ತಾಕ್ ಸ್ಪಷ್ಟನೆ ನೀಡುವ ಅಗತ್ಯವಿದೆ.


ಬಾನು ಮುಷ್ತಾಕ್ ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತಾರಾಷ್ಟ್ರೀಯ ಬೂಕ‌ರ್ ಪ್ರಶಸ್ತಿ ಗೆದ್ದ ಮೊದಲ ಕನ್ನಡದ ಮಹಿಳೆಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ ನಿಜ. ಆದರೆ, ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ.


ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ‌ ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಹಾಗೂ ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವ.


ಈ ಪವಿತ್ರ ಪರಂಪರೆಯನ್ನು ಗಮನಿಸಿದರೆ‌ ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ಅವರ ಗೌರವ ಸ್ಪಷ್ಟಪಡಿಸುವುದು ಈ ಸಂದರ್ಭದಲ್ಲಿ ಅತ್ಯಂತ ಅಗತ್ಯ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article