YouTuber ಸಮೀರ್ ವಿಚಾರಣೆ ಅಂತ್ಯ, ನಾಳೆ ಮತ್ತೆ ಬುಲಾವ್
Sunday, August 24, 2025
ಲೋಕಬಂಧು ನ್ಯೂಸ್, ಬೆಳ್ತಂಗಡಿ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಮ್.ಡಿ. ಭಾನುವಾರ ಬೆಳಗ್ಗೆಯಿಂದ ಸಂಜೆ ವರೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ತೆರಳಿದ್ದಾನೆ.ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ದಾಖಲೆಯೊಂದಿಗೆ ವಿಚಾರಣೆ ನಡೆಸಿದ್ದು. ಆ.25 ಸೋಮವಾರ ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ.
ವೀಡಿಯೊ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.