-->
Bengaluru: ಸಮೀಕ್ಷೆ ಮುಂದೂಡಿಕೆ ಇಲ್ಲ

Bengaluru: ಸಮೀಕ್ಷೆ ಮುಂದೂಡಿಕೆ ಇಲ್ಲ

ಲೋಕಬಂಧು ನ್ಯೂಸ್, ಬೆಂಗಳೂರು
ಯಾವುದೇ ಕಾರಣಕ್ಕೂ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯ ಮುಂದೂಡುವುದಿಲ್ಲ. ಸೆ.22ರಿಂದ ಸಮೀಕ್ಷೆ ಶುರುವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ.


ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ. ಸಮೀಕ್ಷೆ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ads on article

Advertise in articles 1

advertising articles 2

Advertise under the article