BJPಯಿಂದ 'ರಸ್ತೆ ಗುಂಡಿಗಳೊಂದಿಗೆ ಸೆಲ್ಫಿ' ಅಭಿಯಾನ
Friday, September 19, 2025
ಲೋಕಬಂಧು ನ್ಯೂಸ್, ಉಡುಪಿ
ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ 'ರಸ್ತೆ ಗುಂಡಿಗಳ ಜೊತೆ ಸೆಲ್ಫಿ' ಅಭಿಯಾನ'ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ 'ರಸ್ತೆ ಗುಂಡಿಗಳ ಜೊತೆ ಸೆಲ್ಪಿ' ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು.ರಾಜ್ಯ ಸರಕಾರ ಎಚ್ಚೆತ್ತುಕೊಂಡು ರಸ್ತೆಗಳ ಹೊಂಡ ಮುಚ್ಚಲು ತುರ್ತು ಕ್ರಮ ವಹಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಅಗ್ರಹಿಸಿದ್ದಾರೆ.