Byndur ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಹಳ್ಳಿಗಳು ಬೇಡ
Saturday, September 20, 2025
ಲೋಕಬಂಧು ನ್ಯೂಸ್, ಉಡುಪಿ
ಹಳ್ಳಿಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನ ಸಭೆಯಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ಹಳ್ಳಿಗಳು, ಅರಣ್ಯ ಪ್ರದೇಶಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಸೇರಿಸಿರುವುದರಿಂದ ಜನರಿಗೆ ಸಮಸ್ಯೆಯಾಗಿದೆ ಎಂದರು.
ಹಳ್ಳಿಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡುವ ವರೆಗೂ ನಾವು ಯವುದೇ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಭಾವಹಿಸುವುದಿಲ್ಲ. ನಮ್ಮ ಬೇಡಿಕೆ ಈಡೇರುವ ವರೆಗೆ ಬೈಂದೂರಿನಲ್ಲಿ ಪ್ರತಿಭಟನೆ ಮುಂದುವರಿಸುತ್ತೇವೆ ಎಂದೂ ಹೇಳಿದರು.
ಅರುಣ್ ಕುಮಾರ್, ವೀರಭದ್ರ ಗಾಣಿಗ, ಕೃಷ್ಣ ದೇವಾಡಿಗ, ಮ್ಯಾಥ್ಯೂ, ನಾಗರಾಜ್ ಮರಾಠೆ ಮೊದಲಾದವರಿದ್ದರು.
ರೈತರ ಆಗ್ರಹ,ವಿರೋಧ ಏನು?
5 ವರ್ಷದ ಹಿಂದೆ ಬೈಂದೂರು ಪುರಸಭೆಯನ್ನು ಬೈಂದೂರು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲಾಗಿದ್ದು, ಈವರೆಗೂ ಚುನಾವಣೆ ನಡೆದಿಲ್ಲ. ಹಾಗಾಗಿ ಅಭಿವೃದ್ಧಿ ಮರೀಚಿಕೆಯಾಗಿದೆ. ಅಲ್ಲದೆ, ಬೈಂದೂರು ಪಟ್ಟಣ ವ್ಯಾಪ್ತಿ ಬಿಟ್ಟು ಗ್ರಾಮಾಂತರ ಪ್ರದೇಶಗಳು, ಅರಣ್ಯ ಪ್ರದೇಶಗಳನ್ನೂ ಸೇರಿಸಿಕೊಂಡಿರುವುದರಿಂದ ಗ್ರಾಮಾಂತರ ಪ್ರದೇಶದ ರೈತರು ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ರೈತ ಸಂಘ ನಿರಂತರ ಹೋರಾಟ ನಡೆಸಿಕೊಂಡು ಬಂದಿದೆ.
ಸರಕಾರದ ಪ್ರಸ್ತಾವಿತ ಯೋಜನೆಯಲ್ಲಿ 20 ವಾರ್ಡ್‌ಗಳನ್ನು ರಚಿಸಲಾಗಿದ್ದು, ಅದರಲ್ಲಿ ಗ್ರಾಮಾಂತರ ಪ್ರದೇಶಗಳನ್ನು ಸೇರಿಸಿ 9 ವಾರ್ಡ್‌ಗಳನ್ನು ರಚಿಸಲಾಗಿದೆ.
ಈಮಧ್ಯೆ, ಜಿಲ್ಲಾಧಿಕಾರಿ ನೇತೃತ್ವದ ತಂಡ ಪಟ್ಟಣ ಪಂಚಾಯತ್'ನ ಸರ್ವೇ ನಡೆಸಿ 11 ವಾರ್ಡ್‌ಗಳನ್ನು ರಚಿಸಿ ಸರಕಾರದ ಅನುಮೋದನೆಗೆ ಸಲ್ಲಿಸಿತ್ತು. ಆದರೆ, ಸರಕಾರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ.