Manipal: ಸಮುದಾಯ ಸೇವೆಯೊಂದಿಗೆ ಹುಟ್ಟುಹಬ್ಬ ಆಚರಣೆ
Thursday, September 18, 2025
ಲೋಕಬಂಧು ನ್ಯೂಸ್, ಮಣಿಪಾಲ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕುಲಾಧಿಪತಿ ಪದ್ಮಭೂಷಣ ಡಾ. ರಾಮದಾಸ್ ಎಂ. ಪೈ 90ನೇ ಹುಟ್ಟುಹಬ್ಬವನ್ನು ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಬುಧವಾರ ಆಚರಿಸಲಾಯಿತು.ಶೈಕ್ಷಣಿಕ, ಸಮುದಾಯ, ಆರೋಗ್ಯ ವೃತ್ತಿಪರರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮದಂಗವಾಗಿ :'ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಪರಿರ್ತನೆಯ ಮುಂದಾಳತ್ವ' ವಿಷಯದ ಕುರಿತು ವಿಎಸ್ಒ ಆಶ್ರಯದ 6ನೇ ರಾಷ್ಟ್ರೀಯ ಸಮ್ಮೇಳನ ನಡೆಸಲಾಗಿದ್ದು ಸುಮಾರು 700 ಮಂದಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಲಿಯೋಬೆನ್ ವಿಶ್ವವಿದ್ಯಾಲಯದ (ಆಸ್ಟ್ರಿಯಾ) ಪ್ರೊ.ಪೀಟರ್ ಮೋಸರ್ ಮತ್ತು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಕೆನಡಾ)ದ ಪ್ರೊ. ಜಾನ್ ಗಿಲ್ಬರ್ಟ್ ಸೇರಿದಂತೆ ವಿವಿಧ ಗಣ್ಯರು ಇದ್ದರು.
ಡಾ. ಪೈ ಹುಟ್ಟುಹಬ್ಬ ಅಂಗವಾಗಿ ನಡೆಸಲಾದ ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ಸುಮಾರು 2 ಸಾವಿರ ಮಂದಿ ಭಾಗವಹಿಸಿ ಸೃಜನಶೀಲತೆ ಮತ್ತು ದೃಶ್ಯ ಅಭಿವ್ಯಕ್ತಿಗಾಗಿ `ಮೇಘಮಲ್ಹಾರ್: ಮಳೆ ಮತ್ತು ಲಯಕ್ಕೆ ದೃಶ್ಯ ಗೌರವ' ಹಾಗು `ನನ್ನ ಮಾಹೆ, ನನ್ನ ಕ್ಯಾಂಪಸ್' ಎಂಬ ಎರಡು ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.
ಅಂಗಾಂಗ ದಾನ ನೋಂದಣಿ ಮೂಲಕ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಲಾಗಿದ್ದು, ಮಣಿಪಾಲ ಸಂಸ್ಥೆಯ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಮತ್ತು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿತು.
ಡಾ.ರಾಮದಾಸ ಪೈ ಹುಟ್ಟುಹಬ್ಬ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಉಡುಪಿ ಮತ್ತು ದ.ಕ. ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಮಂಗಳೂರಿನ ಕಸ್ತೂರ್ಬಾ ಆಸ್ಪತ್ರೆ, ಕೆಎಂಸಿ ಅತ್ತಾವರ ಮತ್ತು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಸೇರಿದಂತೆ ಸುಮಾರು 20 ಸಾವಿರ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಸುಮಾರು ಒಂದು ಸಾವಿರ ಮಂದಿ ಯಕ್ಷಗಾನ ಕಲಾವಿದರಿಗೆ ಮಣಿಪಾಲ ಆರೋಗ್ಯ ಕಾರ್ಡ್ ನೀಡಲಾಯಿತು
ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ.ವೆಂಕಟೇಶ್, ಡಾ. ರಂಜನ್ ಪೈ, ಡೀನ್ ಡಾ. ಶರತ್ ಕುಮಾರ್ ರಾವ್, ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮೊದಲಾದವರಿದ್ದರು.
ಮಂಗಳೂರು, ಬೆಂಗಳೂರು, ಜೆಮ್ ಶೆಡ್ ಪುರ ಮತ್ತು ದುಬೈನಲ್ಲಿನ ಮಣಿಪಾಲ್ ಗ್ರೂಪ್ನ ಎಲ್ಲಾ ಕ್ಯಾಂಪಸ್ಗಳಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ನಡೆಯಿತು. ಸೆ.20ರಂದು ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾಲೇಜು ಶಿಕ್ಷಕರ ಸಮಾವೇಶದಂದು ಸಮಾರೋಪ ಸಮಾರಂಭ ನಡೆಯಲಿದೆ.
ರಾಷ್ಟ್ರೀಯ ಛಾಯಚಿತ್ರ ಸ್ಪರ್ಧೆಯಲ್ಲಿ ಭಾರತದಾದ್ಯಂತ ಸುಮಾರು 2 ಸಾವಿರ ಮಂದಿ ಭಾಗಿಯಾಗಿದ್ದಾರೆ
ವಿಎಸ್ಒ ಹಮ್ಮಿಕೊಂಡಿದ್ದ ಸುಸ್ಥಿರತೆ ಕುರಿತು ರಾಷ್ಟ್ರೀಯ ಸಮ್ಮೇಳನದಲ್ಲಿ 15 ರಾಷ್ಟ್ರೀಕೃತ ಎನ್ಜಿಒ ಪ್ರದರ್ಶನ, ವಿಶ್ವಸಂಸ್ಥೆಯ ವಿವಿಧ ಎಸ್ಜಿಡಿಗಳ ಕುರಿತು 110 ಪೋಸ್ಟರ್ ಪ್ರದರ್ಶಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಸುಮಾರು 200 ರಕ್ತದಾನಿಗಳು ಭಾಗವಹಿಸಿದ್ದರು.