Mysore: ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
Monday, September 22, 2025
ಲೋಕಬಂಧು ನ್ಯೂಸ್, ಮೈಸೂರು
ದಸರಾ ಫಲಪುಷ್ಪ ಪ್ರದರ್ಶನವನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ನಗರದ ಕುಪ್ಪಣ್ಣ ಪಾರ್ಕ್‌ನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಸಿಎಂ, ಸಚಿವರೊಂದಿಗೆ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಬಾರಿ ಜಂಬೂಸವಾರಿ ದಿನವೇ ಗಾಂಧಿ ಜಯಂತಿ ಇರುವ ಕಾರಣ ಮಹಾತ್ಮ ಗಾಂಧಿ ನೆನಪಿಗಾಗಿ ಉದ್ಯಾನದಲ್ಲಿರುವ ಗಾಜಿನ ಮನೆಯಲ್ಲಿ 3 ಲಕ್ಷ ಗುಲಾಬಿ ಹೂಗಳಿಂದ ಕನ್ಯಾಕುಮಾರಿಯಲ್ಲಿರುವ ಗಾಂಧಿ ಮಂಟಪದ ಆಕೃತಿ ನಿರ್ಮಿಸಲಾಗಿದೆ.