
Mysore: ನಾಡಹಬ್ಬದಲ್ಲಿ ರಾಜಕೀಯ ಕೂಡದು
Monday, September 22, 2025
ಲೋಕಬಂಧು ನ್ಯೂಸ್, ಮೈಸೂರು
ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
'ಗೋಡಾ ಹೈ, ಮೈದಾನ್ ಭೀ ಹೈ' ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ. ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರನ್ನು ವಿರೋಧಿಸಿದ್ದರು.
ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.
ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ.
ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮಹಿಳೆ. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ಸಿಎಂ ಹೇಳಿದರು.