Mysore: ವೆಂಕಟೇಶ್ ಕುಮಾರ್ `ಕರ್ನಾಟಕ ಸಂಗೀತ ವಿದ್ವಾನ್'
Tuesday, September 23, 2025
ಲೋಕಬಂಧು ನ್ಯೂಸ್, ಮೈಸೂರು
ಖ್ಯಾತ ಹಿಂದೂಸ್ಥಾನಿ ಗಾಯಕ ಪಂ.ವೆಂಕಟೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ 'ಕರ್ನಾಟಕ ಸಂಗೀತ ವಿದ್ವಾನ್' ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಅವರು, ವೆಂಕಟೇಶ ಕುಮಾರ್ ಅವರಿಗೆ ಈ ಪುರಸ್ಕಾರ ಲಭಿಸುತ್ತಿರುವುದು ಕೇವಲ ಅವರ ಸಂಗೀತ ಸಾಧನೆಗೆ ಲಭಿಸಿದ ಗೌರವ ಮಾತ್ರವಲ್ಲ, ಅವರನ್ನು ಗೌರವಿಸುವ ಮೂಲಕ ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮೆಚ್ವುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ, ದಸರಾ ಸಂದರ್ಭದಲ್ಲಿ ಪ್ರತೀ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿ ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತ್ಯಂತ ಅರ್ಹರು ಎಂದರು.
ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂಬ ಶಾಸಕ ಶ್ರೀವತ್ಸ ಬೇಡಿಕೆಯಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಮೊದಲಾದವರಿದ್ದರು.