-->
Shimoga: ಆಗುಂಬೆ ಘಾಟಿಯಲ್ಲಿ ಭೂಕುಸಿತ

Shimoga: ಆಗುಂಬೆ ಘಾಟಿಯಲ್ಲಿ ಭೂಕುಸಿತ

ಲೋಕಬಂಧು ನ್ಯೂಸ್, ಶಿವಮೊಗ್ಗ
ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾದ ಘಟನೆ‌ ಶುಕ್ರವಾರ ನಡೆದಿದೆ.ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತವಾಗಿದ್ದು, ರಸ್ತೆ ಮೇಲೆ ಧರೆಯ ಮಣ್ಣು ಕುಸಿದು ಬಿದ್ದಿದೆ.


ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ.


ಟ್ರಾಫಿಕ್ ಜಾಮ್ ಕೂಡಾ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮಣ್ಣಿನ ತೆರವು ತಡವಾಗುವ ಕಾರಣದಿಂದ ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಆಗಲಿದೆ.


ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿ ಮಾಡುತ್ತಿದೆ. ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article