
Udupi: ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ
Saturday, September 13, 2025
ಲೋಕಬಂಧು ನ್ಯೂಸ್, ಉಡುಪಿ
ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅವರ ತವರು ಜಿಲ್ಲೆಗಳ ಗೌರವ ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಶಾಸಕ ಯಶಪಾಲ್ ಸುವರ್ಣ ಆಶಿಸಿದರು.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಕ್ರೀಡಾ ಪ್ರೋತ್ಸಾಹವಿದೆ. ಕ್ರೀಡಾಂಗಣದ ಸೌಲಭ್ಯಗಳನ್ನು ಉಪಯೋಗಿಸಿ ದೇಶ ವಿದೇಶಗಳಲ್ಲಿ ಹೆಸರು ಮಾಡಲಿ ಎಂದು ಹಾರೈಸಿದರು.
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲೆಗಳ ಕ್ರೀಡಾ ಸಂಚಾಲಕರು ಇದ್ದರು.