Udupi: ಸಾಮಾಜಿಕ ಆರ್ಥಿಕ ಸಮೀಕ್ಷೆಗೆ ಸಹಕರಿಸಿ
Friday, September 19, 2025
ಲೋಕಬಂಧು ನ್ಯೂಸ್, ಉಡುಪಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಲು ಸೆ.22ರಿಂದ ಅ.7ರ ವರೆಗೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲೂ ನಡೆಯುವ ಸಮೀಕ್ಷೆಗೆ ಸರ್ವರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿನಂತಿಸಿದ್ದಾರೆ.ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು ಸಮೀಕ್ಷೆಗೆ ರೇಶನ್ ಕಾರ್ಡ್, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಚುನಾವಣಾ ಗುರುತಿನ ಚೀಟಿ ಹಾಗೂ ವಿಶೇಷಚೇತನರಾಗಿದ್ದರೆ ಯು.ಐ.ಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣಪತ್ರ ಇತ್ಯಾದಿ ಕುಟುಂಬ ಸದಸ್ಯರ ದಾಖಲೆಗಳನ್ನು ನೀಡಿ, ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.