-->
Udupi: ಮಹಿಳಾ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದ 'ಇಂದಿರಾಬಾಯಿ'

Udupi: ಮಹಿಳಾ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದ 'ಇಂದಿರಾಬಾಯಿ'

ಲೋಕಬಂಧು ನ್ಯೂಸ್, ಉಡುಪಿ
ವಿಧವಾ ವಿವಾಹಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಇತಿಹಾಸ ಕನ್ನಡದ ಮೊತ್ತಮೊದಲ `ಇಂದಿರಾಬಾಯಿ' ಕಾದಂಬರಿಯಲ್ಲಿ ಅಡಕವಾಗಿದ್ದು, ಮಹಿಳಾ ಶಿಕ್ಷಣಕ್ಕೂ ಸಂಬಂಧಿಸಿರುವ ಕೃತಿ ಆಗಿರುವುದರಿಂದ ವಿದ್ಯಾರ್ಥಿಗಳು ಆ ಕೃತಿಯನ್ನು ಓದಬೇಕು  ಎಂದು ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಲೇಖಕಿ ಧರಣಿದೇವಿ ಮಾಲಗತ್ತಿ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ, ಗುಲ್ವಾಡಿ ಟಾಕೀಸ್, ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ಕೋಟದ ಉಸಿರು ಅಧ್ಯಯನ ತರಬೇತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ನಗರದ ಪುರಭವನದಲ್ಲಿ ಶನಿವಾರ ನಡೆದ ಗುಲ್ವಾಡಿ ವೆಂಕಟ್ರಾವ್ ಅವರ 'ಇಂದಿರಾಬಾಯಿ' ಕೃತಿಯಲ್ಲಿನ ಮಹಿಳಾ ಸಾಮಾಜಿಕ ಸ್ಥಿತ್ಯಂತರಗಳು ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.


ಗುಲ್ವಾಡಿ ಅವರು ಈ ಕೃತಿಯ ಮೂಲಕ ಧರ್ಮದಲ್ಲಿನ ಮೌಢ್ಯಗಳನ್ನು ತೊಡೆದುಹಾಕಲು ಪ್ರಯತ್ನಿಸಿದ್ದರು ಎಂದರು.


ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಗುಲ್ವಾಡಿ ಅವರು ತಮ್ಮ ಕಾದಂಬರಿಯಲ್ಲಿ ಸಮಾಜದ ಸ್ಥಿತ್ಯಂತರಗಳನ್ನು ದಾಖಲಿಸಿದ್ದಾರೆ ಎಂದರು.


ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಮಾನವ ಸ್ವಭಾವದ ಕ್ರೌರ್ಯ ಮತ್ತು ಒಳ್ಳೆಯತನದ ನಡುವಿನ ಸಂಘರ್ಷವನ್ನೂ `ಇಂದಿರಾಬಾಯಿ' ಕಾದಂಬರಿಯಲ್ಲಿ ಚಿತ್ರಿಸಲಾಗಿದೆ ಎಂದರು.


ಸಾಹಿತಿ ಪಾದೆಕಲ್ಲು ಡಾ.ವಿಷ್ಣುಭಟ್, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ. ಉಪಸ್ಥಿತರಿದ್ದರು.


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನರೇಂದ್ರ ಕುಮಾರ್ ಕೋಟ, ಸತೀಶ್ ವಡ್ಡರ್ಸೆ, ಪುಂಡಲೀಕ ಮರಾಠೆ, ರಾಮಚಂದ್ರ ಐತಾಳ ಗುಂಡ್ಮಿ, ಡಾ.ನಿಕೇತನ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಧರಣಿದೇವಿ ಮಾಲಗತ್ತಿ ಅವರಿಗೆ ಗುಲ್ವಾಡಿ ವೆಂಕಟ್ರಾವ್ ಪ್ರಶಸ್ತಿ ಹಾಗೂ ಮೊಹಮ್ಮದ್ ರಫೀ ಪಾಷ ಅವರಿಗೆ ಸಂತೋಷ ಕುಮಾರ್ ಗುಲ್ವಾಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಯಾಕೂಬ್ ಖಾದರ್ ಗುಲ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಹೊಳೆಯಪ್ಪ ಉಪಸ್ಥಿತರಿದ್ದರು.


ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಪಿ.ಮನೋಹರ್ ಭಟ್ ವಂದಿಸಿದರು. ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಶ್ರೀನಿವಾಸ ಭಂಡಾರಿ, ಅರುಣ್ ಕುಮಾರ್ ಶಿರೂರು ನಿರ್ವಹಣೆ ಮಾಡಿದರು.

Ads on article

Advertise in articles 1

advertising articles 2

Advertise under the article