.jpg)
Udupi: ಚಂದ್ರೋದಯ ಕಾಲದಲ್ಲಿ ಅರ್ಘ್ಯ ಪ್ರದಾನ
Monday, September 15, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಭಾನುವಾರ ರಾತ್ರಿ 12.11 ಗಂಟೆ ರೋಹಿಣಿ ನಕ್ಷತ್ರದ ಸುಮುಹೂರ್ತದಲ್ಲಿ ಚಂದ್ರೋದಯ ಕಾಲದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಯತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು.
ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚಾಮರ ಸೇವೆ ಮಾಡಿ, ಕಿರಿಯ ಶ್ರೀಪಾದರು ರಾತ್ರಿ ಪೂಜೆ ಮಾಡಿದರು. ನಂತರ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಪೂಜೆಯನ್ನು ಪುತ್ತಿಗೆ ಮಠದ ಉಭಯ ಶ್ರೀಪಾದರು ನೆರವೇರಿಸಿದರು.
ನಂತರ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ್ ತಂತ್ರಿ, ಶ್ರೀಮಠದ ವಿಷ್ಣುಮೂರ್ತಿ ಉಪಾಧ್ಯ ಮೊದಲಾದವರು ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು.
ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರು ಕೃಷ್ಣಾರ್ಘ್ಯ ಪ್ರದಾನ ಮಾಡಿದರು.