.jpg)
Udupi: ಮಡಿಕೆ ಒಡೆಯುವ ಸ್ಪರ್ಧೆಗೆ ಚಾಲನೆ
Monday, September 15, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ವತಿಯಿಂದ ಸೋಮವಾರ ನಡೆದ ಶ್ರೀಕೃಷ್ಣ ಲೀಲೋತ್ಸವ ವಿಟ್ಲಪಿಂಡಿ ಮಹೋತ್ಸವ ಅಂಗವಾಗಿ ರಥಬೀದಿಯಲ್ಲಿ ಆಯೋಜಿಸಿದ್ದ ಮಡಿಕೆ ಒಡೆಯುವ ಸ್ಪರ್ಧೆಗೆ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಪಾದರು ಶ್ರೀಕೃಷ್ಣನಿಗೆ ಕ್ರೀಡೆ ಎಂದರೆ ಇಷ್ಟ. ಕೃಷ್ಣಪ್ರೀತಿಯ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಕೃಷ್ಣ ಮಂಡಲೋತ್ಸವದಲ್ಲಿ ಕ್ರೀಡೋತ್ಸವ ಆಯೋಜಿಸಲಾಗಿದೆ. ಅದರಲ್ಲಿ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಕೃಷ್ಣಕೃಪೆಗೆ ಪಾತ್ರರಾಗಬೇಕು ಎಂದು ಆಶಿಸಿದರು.
ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ್ ತಂತ್ರಿ ಮೊದಲಾದವರಿದ್ದರು.
ಬಳಿಕ ಸಾರ್ವಜನಿಕರಿಗೆ ಸ್ಪರ್ಧೆ ನಡೆಸಲಾಯಿತು.