.jpg)
Udupi: ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಆಯ್ಕೆ
Saturday, September 13, 2025
ಲೋಕಬಂಧು ನ್ಯೂಸ್, ಉಡುಪಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಮತ್ತು ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಯೋಗದಲ್ಲಿ ನೀಡುವ ಪ್ರಸಕ್ತ ಸಾಲಿನ ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ.ಭಂಡಾರಿ ಆಯ್ಕೆಯಾಗಿದ್ದಾರೆ.
ಸೆ.24ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಾ.ಪಿ.ವಿ. ಭಂಡಾರಿ ಅವರು ದೊಡ್ಡಣಗುಡ್ಡೆ ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಜ್ಞ ಮನೋಚಿಕಿತ್ಸಕ ಮತ್ತು ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಹೋರಾಟಗಾರರಾಗಿ ಅವರು ಹಲವು ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಕೊಂಡಿದ್ದಾರೆ. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಭಂಡಾರಿ ಕೊಡುಗೆ ದೊಡ್ಡದು.
ಮನೋಚಿಕಿತ್ಸಕರಾಗಿ ಅನೇಕರಿಗೆ ನೆಮ್ಮದಿಯ ಬದುಕನ್ನು ನೀಡಿದ ಹೆಗ್ಗಳಿಕೆ ಡಾ.ಭಂಡಾರಿ ಅವರಿ ಅವರದು ಎಂದು ಚಿಕ್ಕಮಠ ವಿವರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸಂಗೊಳ್ಳಿ ರಾಯಣ್ಣ ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು, ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಪ್ರಸನ್ನ ಹಿರೇಮಠ್ ಇದ್ದರು.