Udupi: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ
Sunday, September 21, 2025
ಲೋಕಬಂಧು ನ್ಯೂಸ್, ಉಡುಪಿ
ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿನ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಭಾನುವಾರ ಉದ್ಘಾಟಿಸಿದರುಬಳಿಕ ಮಾತನಾಡಿದ ಅವರು, ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಉಡುಪಿ ರೈಲು ನಿಲ್ದಾಣವನ್ನು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಚಿಕ್ಕಮಗಳೂರು ರೈಲು ನಿಲ್ದಾಣದಲ್ಲಿ 22 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ನಡೆಯುತ್ತಿದೆ ಎಂದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿತ್ತು. ಈಗ ಸಾಕಾರವಾಗಿರುವುದರಿಂದ ಈ ಪ್ರದೇಶದಲ್ಲಿ ಸಂಚಾರ ಅಡಚಣೆಗಳು ಕಡಿಮೆಯಾಗಲಿವೆ.
ಯಾವುದೇ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ರೈಲ್ವೆ ಇಲಾಖೆ ಕಾಮಗಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳಿಂದಾಗಿ ಇಂದು ಕರಾವಳಿ ಭಾಗದಲ್ಲಿ ಪ್ರಗತಿಯಾಗುತ್ತಿದೆ ಎಂದರು.
ಎನ್‌ಡಿಎ ಸರ್ಕಾರ ಕಳೆದ 11 ವರ್ಷದಲ್ಲಿ ಕರ್ನಾಟಕಕ್ಕೆ ನೀಡಿದ ಅನುದಾನದ ಶೇ.25ರಷ್ಟನ್ನೂ ಹಿಂದಿನ ಯುಪಿಎ ಸರ್ಕಾರ ನೀಡಿಲ್ಲ. ಯುಪಿಎ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿರಲಿಲ್ಲ. ರಾಜ್ಯದಲ್ಲಿ 6 ಸಾವಿರ ಕಿ.ಮೀ. ಇದ್ದ ರಾಷ್ಟ್ರೀಯ ಹೆದ್ದಾರಿ ಇಂದು 10 ಸಾವಿರ ಕಿ.ಮೀ. ಆಗಿ ವಿಸ್ತರಣೆಯಾಗಿದೆ ಎಂದೂ ಹೇಳಿದರು.
ಹುಬ್ಬಳ್ಳಿ- ಅಂಕೋಲ ಯೋಜನೆಯ ಅಡೆತಡೆಗಳೂ ಪರಿಹಾರವಾಗಲಿವೆ. ಅರಣ್ಯ ಇಲಾಖೆಯ ಅನುಮತಿ ವಿಚಾರ ಈಗ ಪರಿಹಾರ ಹಂತದಲ್ಲಿದೆ ಎಂದರು.
ಶಾಸಕರಾದ ವಿ.ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ ಮತ್ತು ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮೊದಲಾದವರಿದ್ದರು.
ದ.ಕ. ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ನಿರೂಪಿಸಿ, ಉಡುಪಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು.