Ujire: ತಿಮರೋಡಿ ಬಳಿ ಮಾರಕಾಸ್ತ್ರ ಪತ್ತೆ
Thursday, September 18, 2025
ಲೋಕಬಂಧು ನ್ಯೂಸ್, ಉಜಿರೆ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಒಂದು ಬಂದೂಕು ಎರಡು ತಲವಾರು ಪತ್ತೆಯಾಗಿದ್ದು, ಆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಸ್ಪಿ ಸೈಮನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್'ನಡಿ ಪ್ರಕರಣ ದಾಖಲಿಸಿದ್ದಾರೆ.
ಆ.26ರಂದು ಚಿನ್ನಯ್ಯನನ್ನು ತಿಮರೋಡಿಯ ನಿವಾಸಕ್ಕೆ ಕರೆದುಕೊಂಡು ಬಂದು ಎಸ್ಐಟಿ ಶೋಧಕಾರ್ಯ ನಡೆಸಿತ್ತು. ತಿಮರೋಡಿ ಮನೆಯಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸುವ ಸಂದರ್ಭ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿತ್ತು.