Ujire: ಪಲಿಮಾರು ಶ್ರೀ ಧರ್ಮಸ್ಥಳ ಭೇಟಿ
Wednesday, September 17, 2025
ಲೋಕಬಂಧು ನ್ಯೂಸ್, ಉಜಿರೆ
ಉಡುಪಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದ್ದು,ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಶ್ರೀಪಾದರ ಪಾದಪೂಜೆ ಬಳಿಕ ಡಿ.ವೀರೇಂದ್ರ ಹೆಗ್ಗಡೆ ಫಲಕಾಣಿಕೆ ಸಮರ್ಪಿಸಿ ಗೌರವಿಸಿದರು. ಶ್ರೀಪಾದರು ಹೆಗ್ಗಡೆಯವರಿಗೆ ಪ್ರಸಾದ ನೀಡಿ ಶುಭ ಹಾರೈಸಿದರು.
ಹೇಮಾವತಿ ವೀ.ಹೆಗ್ಗಡೆ ಮತ್ತು ಡಿ.ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.