Bengaluru:ಐದು ವರ್ಷ ಸಿದ್ದರಾಮಯ್ಯ ಸಿಎಂ

ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿರುವ ಮಧ್ಯೆ ಗೃಹ ಸಚಿವ ಡಾ.ಜಿ. ಪರಮೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನು 5 ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ.


ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ನಾವು ಯಾವುದೇ ಅವಧಿ ನಿಗದಿ ಮಾಡಿ ಆಯ್ಕೆ ಮಾಡಿಲ್ಲ. ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದವರು ತಿಳಿಸಿದ್ದಾರೆ.