Udupi: ಯುಗಳ ಪ್ರೇಮಿಗಳು ನೇಣಿಗೆ ಶರಣು

ಲೋಕಬಂಧು ನ್ಯೂಸ್, ಉಡುಪಿ
ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿ ಕಾಳಿಕಾಂಬಾ ನಗರದ ಲೇಬರ್ ಕಾಲನಿಯಲ್ಲಿ ಆಕ್ಟೋಬರ್ 16ರ ರಾತ್ರಿ ವೇಳೆ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ.


ಪವಿತ್ರ ಅಜ್ಜರಕಾಡು‌ ಜಿ.ಶಂಕರ್ ಮಹಿಳಾ ಸರಕಾರ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಅಕೆಯ ತಾಯಿ ರಾಯಚೂರಿಗೆ ತೆರಳಿದ್ದ ಬಳಿಕ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಅವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.


ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದಾರೆ.