ಲೋಕಬಂಧು ನ್ಯೂಸ್, ಉಡುಪಿ
ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯವನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶುಕ್ರವಾರ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ- ಮುಖ್ಯಪ್ರಾಣ ದೇವರ ದರ್ಶನದ ತರುವಾಯ ಗೀತಾ ಮಂದಿರದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು.
ಪುತ್ತಿಗೆ ಶ್ರೀಗಳು ನಡೆಸಿದ ಗೀತಾ ಪ್ರಚಾರ ಕಾರ್ಯ, ಕೃಷ್ಣಮಠದ ಅಭಿವೃದ್ಧಿ ಇತ್ಯಾದಿಗಳನ್ನು ಪ್ರಶಂಸಿಸಿದರು.
ಶ್ರೀಗಳು ಹೆಗ್ಗಡೆಯವರನ್ನು ಗೌರವಿಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಇದ್ದರು.
.jpg)
.jpg)