ಲೋಕಬಂಧು ನ್ಯೂಸ್, ಮಂಡ್ಯ
ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರು ಶಿವರಾತ್ರಿ ಶಿವಯೋಗಿ ಮಹಾಸ್ವಾಮಿಗಳ 1066ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಣ್ಯರ ಆಗಮನದ ಮುಖ್ಯದ್ವಾರ, ಪಾರ್ಕಿಂಗ್, ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.