ಸುವರ್ಣಸೌಧ ಮುತ್ತಿಗೆಗೆ ಯತ್ನ: ಬಿಜೆಪಿಯ 50ಕ್ಕೂ ಅಧಿಕ ನಾಯಕರ ಬಂಧನ

ಲೋಕಬಂಧು ನ್ಯೂಸ್, ಬೆಳಗಾವಿ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಲ್ಲಿನ ಮಾಲಿನಿ ಸಿಟಿ ಬಳಿ ಮಂಗಳವಾರ ಬೃಹತ್ ಸಮಾವೇಶ ನಡೆಸಿದ ಬಿಜೆಪಿ ನಾಯಕರು, ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಆದರೆ, ಪೊಲೀಸರು ಅತ್ಯಂತ ಬಿಗಿ ಭದ್ರತೆ ಕೈಗೊಂಡು, ಮುತ್ತಿಗೆ ಯತ್ನ ವಿಫಲಗೊಳಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ನೂರಾರು ಪ್ರಮುಖ ನಾಯಕರನ್ನು ವಶಕ್ಕೆ ಪಡೆದರು.
ವಿಪಕ್ಷ ನಾಯಕ ಆ‌ರ್. ಅಶೋಕ್, ಶಾಸಕರಾದ ಚಲವಾದಿ, ರವಿಕುಮಾ‌ರ್, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.