ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪೂರ್ಣಪ್ರಜ್ಞ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಲೋಕಬಂಧು ನ್ಯೂಸ್, ಉಡುಪಿ
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಉಡುಪಿ ಜಿಲ್ಲೆ ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಸಹಯೋಗದಲ್ಲಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿಭಾಗದಲ್ಲಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಂಕಿತಾ ಗುರುರಾಜ್ ಪಡುಬಿದ್ರೆ ಏಕಪಾತ್ರಾಭಿನಯದಲ್ಲಿ ಪ್ರಥಮ, ಜಾನಪದ ನೃತ್ಯದಲ್ಲಿ ವಿಭವ್ ಪ್ರಥಮ ಹಾಗೂ ರಸಪ್ರಶ್ನೆಯಲ್ಲಿ ದಿಪೇಶ್ ಮತ್ತು ರಾಹುಲ್ ಮುರಳಿ ಭಟ್ ಪ್ರಥಮ ಸ್ಥಾನ ಪಡೆದಿದ್ದಾರೆ.


ದ್ವಿತೀಯ ಪಿಯುಸಿ ವಿಭಾಗದಲ್ಲಿ ಕನ್ನಡ ಭಾಷಣದಲ್ಲಿ ಸಂಕೇತಾ ಪ್ರಥಮ, ಏಕಪಾತ್ರಾಭಿನಯದಲ್ಲಿ ಭೂಮಿಕ ಪಾಟ್ಕರ್ ಪ್ರಥಮ, ಜನಪದ ನೃತ್ಯದಲ್ಲಿ ಸೃಷ್ಟಿ ದ್ವಿತೀಯ ಸ್ಥಾನ ಹಾಗೂ ವಿಜ್ಞಾನ ಮಾದರಿಯಲ್ಲಿ ಮೋಹಿತ್ ರಾವ್ ಪ್ರಥಮ ಸ್ಥಾನ ಪಡೆದಿದ್ದಾರೆ.


ವಿಜೇತ ವಿದ್ಯಾರ್ಥಿಗಳು ಡಿ.15ರಂದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ವಿಜೇತರನ್ನು ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ. ಶ್ರೀರಮಣ ಐತಾಳ್, ಕಾಲೇಜು ಪ್ರಾಂಶುಪಾಲ ಸಂತೋಷ್ ಕುಮಾರ್, ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕ ರಮಾನಂದ ರಾವ್ ಅಭಿನಂದಿಸಿದ್ದಾರೆ.