ಉಡುಪಿಗೆ ಆಗಮಿಸಿದ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯುವ ಬೃಹತ್ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಹ್ವಾನದ ಮೇರೆಗೆ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಭಾನುವಾರ ಆಗಮಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರ್ಯಾಯ ಪುತ್ತಿಗೆ ಮಠದ ಪರವಾಗಿ  ಶ್ರೀಮಠದ ವೆಂಕಟೇಶ್ ಹಾಗೂ ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ ಬರಮಾಡಿಕೊಂಡರು.
ಉಡುಪಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಳ್ಳಲಾಯಿತು. ಬಳಿಕ ಪವನ್ ಕಲ್ಯಾಣ್ ಅವರು ಕೃಷ್ಣಮಠಕ್ಕೆ ತೆರಳಿದರು