ಕೆಟ್ಟ ಸರ್ಕಾರದ ತಪ್ಪು ಹೆಜ್ಜೆ

ಲೋಕಬಂಧು ನ್ಯೂಸ್, ಬೆಳಗಾವಿ
ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನಾದರೂ ಮಾಡಲಿ, ಬಿನ್ ಲಾಡೆನ್ ಜಯಂತಿಯನ್ನಾದರೂ ಮಾಡಲಿ. ಜನರಿಗೆ ಇದು ಯಾವ ರೀತಿಯ ಕೆಟ್ಟ ಸರ್ಕಾರ ಎಂಬುದು ಮನವರಿಕೆಯಾಗಿದೆ. ಕೆಟ್ಟ ಸರ್ಕಾರದ ತಪ್ಪು ಹೆಜ್ಜೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇಲ್ಲಿನ ಸುವರ್ಣಸೌಧ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸುದ್ದಿಗಾರರೊಂದಿಗೆ ಮಾತನಾಡಿದರು.


ಈ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ, ಯಾವ ರೀತಿ ವೈಫಲ್ಯವಾಗಿದೆ ಎಂಬುದು ಜನರಿಗೆ ಗೊತ್ತಾಗಿದೆ, ಅತಿವೃಷ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್‌ನ 6 ಸಾವಿರ ಕೋಟಿ ರೂ. ಪರಿಹಾರ ನೀಡಿದೆ. ಆದರೂ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡುತ್ತಿಲ್. ಹಾಗಾಗಿ ರೈತರ ಬಗ್ಗೆ ಮಾತನಾಡಲು ಈ ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ ಎಂದರು.