ಲೋಕಬಂಧು ನ್ಯೂಸ್, ಬೆಳಗಾವಿ
ಅಧಿವೇಶನದಲ್ಲಿ ರಾಜ್ಯದ ರೈತರಿಗೋಸ್ಕರ ನಾವು ಹೋರಾಟ ಮಾಡುತ್ತೇವೆ. ಕಳೆದ 2 ವರ್ಷದಲ್ಲಿ ರಾಜ್ಯದಲ್ಲಿ 400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸರ್ಕಾರದಿಂದ ರೈತರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಚರ್ಚೆಗಳ ಬಗ್ಗೆ ನಾವು ಈಗಾಗಲೇ ನಿಲುವಳಿ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್‌ನವರು ನಮ್ಮ ಒತ್ತಾಯದ ಮೆರೆಗೆ ನೆರೆ ಪರಿಹಾರದ ಚರ್ಚೆಗೆ ಅವಕಾಶ ಕೊಡಬೇಕು. ಇಲ್ಲವಾದಲ್ಲಿ ಸದನದಲ್ಲಿ ಹೋರಾಟ ಮಾಡುವ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದರು.