ಲೋಕಬಂಧು ನ್ಯೂಸ್, ಉಡುಪಿ
ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಸಂದರ್ಭದಲ್ಲಿ ಶ್ರೀಪಾದರ ಸನ್ಯಾಸ ಆಶ್ರಮ ಸ್ವೀಕಾರ ಮತ್ತು ಪೀಠಾರೋಹಣದ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಭಕ್ತರ ಸಹಕಾರದೊಂದಿಗೆ ನಿರ್ಮಿಸಿ, ಉಡುಪಿ ಶ್ರೀಕೃಷ್ಣನಿಗೆ ಅರ್ಪಿಸಲ್ಪಡುವ ಪಾರ್ಥಸಾರಥಿ ಸುವರ್ಣ ರಥಕ್ಕೆ ಚಿನ್ನದ ಹೊದಿಕೆ ಜೋಡಿಸುವ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಜೊತೆಗೂಡಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಅಧಿಕಾರಿಗಳಾದ ಮುರಳೀಧರ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ಖ್ಯಾತ ಕಲಾವಿದ ಗಂಜೀಫಾ ರಘುಪತಿ ಭಟ್ ಉಪಸ್ಥಿತರಿದ್ದರು.ಈ ಸ್ವರ್ಣ ರಥ ಡಿ. 27ರಂದು ಗಣ್ಯರ ಸಮ್ಮುಖದಲ್ಲಿ ಶ್ರೀಕೃಷ್ಣನಿಗೆ ಸಮರ್ಪಣೆಯಾಗಲಿದೆ.