ಲೋಕಬಂಧು ನ್ಯೂಸ್, ಬೆಳಗಾವಿ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಇಲ್ಲಿನ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿ ಮಾತನಾಡಿದ ಅವರು, ಅದಕ್ಕೆ ಕಾರಣರಾದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ಕಲ್ಬುಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಕುಟುಂಬಿಕರಿಗೆ ಸರ್ಕಾರದ ವತಿಯಿಂದ ಅಭಿನಂದನೆ ತಿಳಿಸಿದರು.