ಟಿಪ್ಪು ಜಯಂತಿ ಮತ್ತೆ ಮುನ್ನೆಲೆಗೆ

ಲೋಕಬಂಧು ನ್ಯೂಸ್, ಬೆಳಗಾವಿ
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌ ವಿಧಾನಸಭಾ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.
ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ- ವಿರೋಧ ಹೇಳಿಕೆಗಳು ವ್ಯಕ್ತವಾಗಿದ್ದು, ಹಿಂಸಾಚಾರಕ್ಕೂ ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಆ‌ರ್. ಅಶೋಕ್‌, ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.


ಸದನದಲ್ಲೇ ಉತ್ತರ
ಟಿಪ್ಪು ಜಯಂತಿ ಆಚರಣೆ ವಿಷಯ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿದೆ. ಅದಕ್ಕೆ ಸದನದಲ್ಲಿಯೇ ಸರ್ಕಾರ ಉತ್ತರಿಸಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.